ಚಿಕ್ಕಮಗಳೂರು :ಶೇಕಡಾವಾರು ಜನಸಂಖ್ಯೆಗೆ ಅನುಗುಣವಾಗಿ ಒಕ್ಕಲಿಗ ಜನಾಂಗಕ್ಕೆ ಶೇಕಡ ೧೭ ರಷ್ಟು ಮೀಸಲಾತಿ ನೀಡುವಂತೆ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಆಗ್ರಹಿಸಿದೆ .
ಸುದ್ದಿಗಾರರ ಜೊತೆ ಮಾತನಾಡಿದ ಸಮಿತಿಯ ಪ್ರಧಾನ ಸಂಚಾಲಕ ನಾಗರಾಜ್ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು, ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಮನ ಹರಿಸುವಂತೆ ಒತ್ತಾಯಿಸಿದರು .
ಸರ್ಕಾರ ತಮ್ಮ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ರೂಪಿಸುವುದಾಗಿ ತಿಳಿಸಿದ ಅವರು ಜನಸಂಖ್ಯೆಗೆ ಅನುಗುಣವಾಗಿ ಎಲ್ಲಾ ಜನಾಂಗದವರಿಗೆ ಮೀಸಲಾತಿ ನೀಡುವಂತೆ ಮನವಿ ಮಾಡಿದರು .
ಪದಾಧಿಕಾರಿಗಳಾದ ರಾಜೇಗೌಡ ,ಧರ್ಮರಾಜ್, ಮುಕುಂದ ರಾಜ್ ಉಪಸ್ಥಿತರಿದ್ದರು

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ