ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಕಂದಾಯ ಸಚಿವ ಆರ್ ಅಶೋಕ್ ಅವರ ಮಾಜಿ ಪಿಎ ಗಂಗಾಧರ್ ವಿರುದ್ಧ ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂದಾಯ ಸಚಿವ ಆರ್ ಅಶೋಕ್ ಇದೇ ತಿಂಗಳ ೨೪ ರಂದು ಶೃಂಗೇರಿಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅವರ ಆಪ್ತ ಸಹಾಯಕ ಗಂಗಾಧರ್ ಶೃಂಗೇರಿಯ ಸಬ್ ರಿಜಿಸ್ಟರ್ ಚೆಲುವರಾಜ್ ಅವರಿಂದ ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ .
ಈ ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕವಾಗಿ ಪ್ರಕಟವಾಗಿ ಸಚಿವರು ಹಾಗೂ ಬಿಜೆಪಿ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿತ್ತು .
ಈ ಹಿನ್ನೆಲೆಯಲ್ಲಿ ಸಚಿವರ ಆಪ್ತ ಸಹಾಯಕನನ್ನು ಮಾತೃ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು .
ಈ ಮಧ್ಯೆ ಲಂಚ ಕೇಳಿದ ಆರೋಪದ ಬಗ್ಗೆ ಸಬ್ ರಿಜಿಸ್ಟರ್ ಠಾಣೆಗೆ ದೂರು ನೀಡಿದ್ದು ., ದೂರು ಹಿಂದೆ ಪಡೆಯುವಂತೆ ರಾಜಕೀಯ ಒತ್ತಡವೂ ಬಂದಿತ್ತು ಎನ್ನಲಾಗಿದೆ .ಕೊನೆಗೂ 3ದಿನಗಳ ಬಳಿಕ ಪ್ರಕರಣ ದಾಖಲಾಗಿದೆ .

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ