ಚಿಕ್ಕಮಗಳೂರು ಜ 30 : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಾಗಿದ್ದು ಕಾಯ್ದೆಯ ಬಗ್ಗೆ ಜನಸಾಮಾನ್ಯರು, ರೈತರಲ್ಲಿ ಜಾಗೃತಿ ಮೂಡಿಸುವಂತೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. ಸಾಕಷ್ಟು ರೈತರು ಕರೆ ಮಾಡುತ್ತಿದ್ದು ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ಸಕಾಲದಲ್ಲಿ ದೊರೆಯುತ್ತಿಲ್ಲ ಎಂದು ಹೇಳುತ್ತಿದ್ದು ವೈದ್ಯರು ತಕ್ಷಣ ಸ್ಪಂದಿಸಬೇಕೆಂದು ತಿಳಿಸಿದರು.
ಜಾನುವಾರುಗಳಿಗೆ ಸೂಕ್ತ ಔಷಧಿಗಳ ವ್ಯವಸ್ಥೆ ಇದ್ದರೂ ಕೆಲ ಪಶುವೈದ್ಯರು ಔಷಧಗಳನ್ನು ಹೊರಗಡೆಯಿಂದ ತರಲು ಚೀಟಿ ಬರೆದುಕೊಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು .
ಎರಡು ಗೋಶಾಲೆ:ಪ್ರತಿ ತಾಲೂಕಿನಲ್ಲಿ ಗೋಮಾಳದ ಸ್ಥಳವನ್ನು ಗುರುತಿಸಿ ಗೋಶಾಲೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ತಿಳಿಸಿ ಖಾಸಗಿ ಗೋಶಾಲೆಗಳನ್ನು ತೆರೆಯಲು ಮುಂದಾದರೆ ನೆರವಾಗಲು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚಿಂದ್ರ ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕರು ಪಾಲ್ಗೊಂಡಿದ್ದರು

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ