ಚಿಕ್ಕಮಗಳೂರು: ತಾಲೂಕಿನ ಮಲ್ಲಂದೂರು ಠಾಣೆ ವ್ಯಾಪ್ತಿಯಲ್ಲಿ ದಲಿತ ಯುವತಿ ಮೇಲೆ ಅತ್ಯಾಚಾರ ಪ್ರಕರಣವೊಂದು ನಡೆದಿದ್ದು ದೂರು ನೀಡಿ 15 ದಿನ ಕಳೆದರೂ ಪೊಲೀಸರು ಆರೋಪಿಯನ್ನು ಬಂಧಿಸಿಲ್ಲ.
ಆರೋಪಿ ಸಂಸದೆ ಶೋಭಾ ಕರಂದ್ಲಾಜೆ ,ಶಾಸಕರಾದ ಸಿ ಟಿ ರವಿ, ಪ್ರಾಣೇಶ್ ಜೂತೆ ಗುರುತಿಸಿಕೊಂಡಿರುವ ಫೋಟೋಗಳು ವೈರಲ್ ಆಗಿವೆ .ಈ ದತ್ತ ಜಯಂತಿಯಲ್ಲಿ ಪಾಲ್ಗೊಂಡಿದ್ದು ಕೇಸರಿ ರುಮಾಲು ರಾರಾಜಿಸುತ್ತಿದೆ !
ಆವತಿ ಗ್ರಾಮದ ಎಚ್ ಟಿ ಮಲ್ಲೇಶ್ ಎಂಬಾತ ತನ್ನ ತೋಟಕ್ಕೆ ಕೂಲಿಗೆಂದು ಯುವತಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದು , ಆಕೆ ಈಗ ಗರ್ಭಿಣಿಯಾಗಿದ್ದಾಳೆ .ಈ ಸಂಬಂಧ ಮಲ್ಲಂದೂರು ಠಾಣೆ ಕೆಲ ದಿನಗಳ ಹಿಂದೆ ದೂರು ನೀಡಲಾಗಿದೆ . ಈವರೆಗೂ ಆರೋಪಿಯನ್ನು ಬಂಧಿಸದೆ ತಲೆಮರೆಸಿಕೊಂಡಿದ್ದಾನೆ ಎಂದು ಹೇಳುತ್ತ ಪರೋಕ್ಷವಾಗಿ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ .
ಆರೋಪಿಯನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಬಹುಜನ ಸಮಾಜ ಪಕ್ಷದ ಕೆ ಟಿ ರಾಧಾಕೃಷ್ಣ ಒತ್ತಾಯಿಸಿದ್ದಾರೆ.
ತನಿಖಾಧಿಕಾರಿ ಬದಲಾವಣೆಗೆ ಆಗ್ರಹ : ಈ ಮಧ್ಯೆ ಶೃಂಗೇರಿಯಲ್ಲಿ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಸಿದ್ದರಾಮಪ್ಪಅವರನ್ನು ಬದಲಿಸ ಬೇಕೆಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ .

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ