ಚಿಕ್ಕಮಗಳೂರು: ಅಕ್ರಮ ಮರ ಕಡಿತಲೆ ಆರೋಪದ ಮೇಲೆ ನಾಲ್ವರು ಅರಣ್ಯ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಲಾಗಿದೆ .
ಮೂಡಿಗೆರೆ ತಾಲ್ಲೂಕಿನ ಬಾಳೂರು ಮೀಸಲು ಅರಣ್ಯದಲ್ಲಿ ಖಾಸಗಿ ಭೂಮಿಯಲ್ಲಿ ಮರ ಕಡಿತಲೆ ಮಾಡಲು ಪರವಾನಗಿಯನ್ನು ಪಡೆದು ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮರವನ್ನು ಕಡಿಯಲಾಗಿದೆ ಎಂದು ಆರೋಪಿಸಲಾಗಿದೆ .
ಚಿಕ್ಕಮಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ ಪನ್ವಾರ್ ,ಪ್ರಾದೇಶಿಕ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ , ಮೂಡಿಗೆರೆ ಮತ್ತು ಕಳಸ ವಲಯ ಅರಣ್ಯಾಧಿಕಾರಿಗಳ ವಿರುದ್ಧ ರಾಮನಗರದ ದಿನೇಶ್ ಕಲ್ಲಹಳ್ಳಿ ಎಂಬುವರು ದೂರನ್ನು ಸಲ್ಲಿಸಿದ್ದಾರೆ .
ಕಳೆದ ಕೆಲ ದಿನಗಳಿಂದ ಈ ಪ್ರಕರಣ ಜಿಲ್ಲೆಯಲ್ಲಿ ಸುದ್ದಿ ಮಾಡುತ್ತಿದ್ದರು ಅರಣ್ಯ ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ ಯಾವುದೇ ಪ್ರತಿಕ್ರಿಯೆಯನ್ನು ಈವರೆಗೂ ನೀಡಿಲ್ಲ .

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ