ಸೋಮವಾರ, ಮಾರ್ಚ್ 22, 2021

4 ಜಿಲ್ಲೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಚಿಕ್ಕಮಗಳೂರು,ಮಾ,೨೨:- ಕರ್ನಾಟಕ ಪವರ್ ಕಾರ್ಪೋರೇಷನ್, ಯುಪಿಸಿಲ್ ಮತ್ತು ಕೆಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ  ತಾಂತ್ರಿಕ ದೋಷ  ಕಂಡು ಬಂದಿದ್ದು ೪ ಜಿಲ್ಲೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ .

 ಮೆಸ್ಕಾಂ ವ್ಯಾಪ್ತಿಯ ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಗಳಲ್ಲಿ ವಿದ್ಯುತ್ ಜಾಲದ ಸುರಕ್ಷತೆಯ ದೃಷ್ಠಿಯಿಂದ ಅನಿಯಮಿತವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಕಂಡು ಬರಬಹುದು ಎಂದಿದೆ .

ನೀರಾವರಿ ಪಂಪ್‌ಸೆಟ್‌ಗಳಿಗೆ ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆ ಹಾಗೂ ಮಧ್ಯರಾತ್ರಿಯಿಂದ ಬೆಳಿಗ್ಗೆ ೪ ಗಂಟೆಯವರೆಗೆ ಮಾತ್ರ ವಿದ್ಯುತ್ ಪೂರೈಕೆ ಸಾಧ್ಯವಾಗಿದೆ. 

ಕೆಲವು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಹಿನ್ನಲೆಯಲ್ಲಿ ಬೇಡಿಕೆಯಷ್ಟು ವಿದ್ಯುತ್ ಪೂರೈಕೆಯಾಗುತ್ತಿಲ್ಲ.

ರಾಜ್ಯದ ವಿದ್ಯುತ್ ಜಾಲವು ಒಟ್ಟು ೪,೨೮೧ ಎಂ.ಡಬ್ಲ್ಯೂ ನಷ್ಟು ಪ್ರಮಾಣದ ವಿದ್ಯುತ್ ಕೊರತೆ ಎದುರಿಸುತ್ತಿದೆ. ಇದರಿಂದ ಮೆಸ್ಕಾಂಗೆ ಹಂಚಿಕೆಯಾಗುವ ವಿದ್ಯುತ್ ಪ್ರಮಾಣದಲ್ಲಿ ಸುಮಾರು ೨೦೦ ಎಂಡಬ್ಲ್ಯೂನಷ್ಟು ಕೊರತೆಯಾಗುವ ಸಂಭವವಿದೆ ಎಂದು ಮೆಸ್ಕಾಂ ಹೇಳಿದೆ .


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...