ಶನಿವಾರ, ಮಾರ್ಚ್ 20, 2021

೨೩ ಕೆರೆ ತುಂಬಿಸುವ ಯೋಜನೆಗೆ ೪೧೮ ಕೋಟಿ ರೂ ಮಂಜೂರು :ಶಾಸಕ ಸುರೇಶ್

 


ಚಿಕ್ಕಮಗಳೂರು.ಮಾ.೨೦: ಲಿಂಗದಹಳ್ಳಿ ಹೋಬಳಿಯಲ್ಲಿರುವ ೨೩ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ೪೧೮ ಕೋಟಿ ರೂ. ಮಂಜೂರಾತಿ ದೊರೆತಿದ್ದು, ಶೀಘ್ರದಲ್ಲಿ ಕೆರೆಗಳನ್ನು ತುಂಬಿಸುವ ಕಾಮಗಾರಿಗೆ ಟೆಂಡರ್ ಕರೆದು ಚಾಲನೆ ನೀಡಲಾಗುವುದು ಎಂದು ತರೀಕೆರೆ ಶಾಸಕ ಸುರೇಶ್ ತಿಳಿಸಿದ್ದಾರೆ .

 ತರೀಕೆರೆ ತಾಲ್ಲೂಕು ಲಿಂಗದಹಳ್ಳಿ ಹೋಬಳಿಯ ನಂದಿಬಟ್ಟಲು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡಿಗೆ ಗ್ರಾಮದ ಕಡೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

  ಲಿಂಗದಹಳ್ಳಿ ಹೋಬಳಿಯ ಕೆರೆಗಳನ್ನು ತುಂಬಿಸಲು  ಭದ್ರಾ ಉಪ ಕಣಿವೆಯಿಂದ ತರೀಕೆರೆ, ಬೀರೂರು, ಕಡೂರು ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ೧,೨೮೧ ಕೋಟಿ ರೂ. ಮಂಜೂರಾಗಿದೆ ಎಂದರು .

ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅಧ್ಯಕ್ಷತೆ ವಹಿಸಿದ್ದರು.

ತರೀಕೆರೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ ಸಂಜೀವ್ ಕುಮಾರ್ , ತಹಸೀಲ್ದಾರ್ ಗೀತಾ  ಮಾತನಾಡಿದರು.

 ಮೂಲ ಸೌಕರ್ಯ- ಸಮಸ್ಯೆಗಳ ಕುರಿತು ಗ್ರಾಮಸ್ಥರು ಮನವಿ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಕೋವಿಡ್-೧೯ ಸಂಬಂಧಿಸಿದಂತೆ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾಮಣಿ, ಉಪಾಧ್ಯಕ್ಷ ರಮೇಶ್, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪಾ, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ನಾರಾಯಣಮೂರ್ತಿ, ತರೀಕೆರೆ ವಿಭಾಗದ ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್  ಉಪಸ್ಥಿತರಿದ್ದರು.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...