ಚಿಕ್ಕಮಗಳೂರು :ಅತ್ಯಾಚಾರ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧಿಸುವಂತೆ ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ .
ಈ ವಿಷಯವನ್ನು ಗಂಭೀರವಾಗಿ ಚರ್ಚಿಸಿದ ಪಕ್ಷದ ಕಾರ್ಯಕಾರಿಣಿ ಸಭೆ , ಪ್ರಕರಣವನ್ನು ದಿಕ್ಕು ತಪ್ಪಿಸುವ ಯತ್ನ ನಡೆದಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಸರನ್ನು ಉದ್ದೇಶಪೂರ್ವಕವಾಗಿ ಎಳೆದು ತಂದಿರುವುದನ್ನು ಖಂಡಿಸಿತು .
ಬೆಳಗಾವಿಯಲ್ಲಿ ಡಿ .ಕೆ .ಶಿವಕುಮಾರ್ ಮೇಲೆ ಹಲ್ಲೆ ನಡೆಸಲು ಯತ್ನಿಸಿರುವುದನ್ನು ಪಕ್ಷ ಖಂಡಿಸಿತಲ್ಲದೆ ರಮೇಶ್ ಜಾರಕಿಹೊಳಿ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಸಭೆ ನಿರ್ಧರಿಸಿತು .
ಪಕ್ಷದ ಜಿಲ್ಲಾ ಅಧ್ಯಕ್ಷ ಅಂಶುಮಂತ್, ಮಾಜಿ ಶಾಸಕರಾದ ಬಿ ಎಲ್ ಶಂಕರ್,ಮೋಟಮ್ಮ , ಗಾಯತ್ರಿಶಾಂತೇಗೌಡ ,ಶ್ರೀನಿವಾಸ್ ಇತರರು ಪಾಲ್ಗೊಂಡಿದ್ದರು .

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ