ಚಿಕ್ಕಮಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾವನೆಗೆ ಮಾಜಿ ಶಾಸಕ ವೈಎಸ್ ವಿ ದತ್ತಾ ತೀರಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ .
ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಂದಿನ ಹತ್ತು ವರ್ಷಗಳ ಅವಧಿಗೆಮೀಸಲಾತಿ ನಿಗದಿಪಡಿಸಿ ಚುನಾವಣಾ ಆಯೋಗ ಈ ಹಿಂದೆ ನಿರ್ಧಾರ ಮಾಡಿತ್ತು ಎಂದರು .
ಸರ್ಕಾರ ಮತ್ತೆ ಈಗ 5ವರ್ಷಗಳಿಗೆ ಸೀಮಿತಗೊಳಿಸಿ ಕ್ಷೇತ್ರಗಳ ಮರು ವಿಂಗಡಣೆಗೆ ಕರಡು ಪ್ರಸ್ತಾವನೆಯನ್ನು ಚುನಾವಣೆ ಆಯೋಗಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದ್ದು ಇದು ಸರಿಯಾದ ಕ್ರಮವಲ್ಲ ಎಂದು ಆಕ್ಷೇಪಿಸಿದರು .
ಸರ್ಕಾರದ ಹಸ್ತಕ್ಷೇಪ ಸರಿಯಲ್ಲ ಎಂದಿರುವ ದತ್ತ ಸರ್ಕಾರದ ಕೈಗೊಂಬೆಯಾಗದೆ ಚುನಾವಣಾ ಆಯೋಗ ಈ ವಿಷಯದಲ್ಲಿ ಖಡಕ್ ನಿರ್ಧಾರ ಮಾಡಬೇಕಿತ್ತು ಎಂದಿರುವ ಅವರು ಕಾನೂನಾತ್ಮಕ ಹೋರಾಟ ಅನಿವಾರ್ಯ ಎಂದರು .

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ