ಚಿಕ್ಕಮಗಳೂರು :ಜಿಲ್ಲೆಯಲ್ಲಿ 32 ಗ್ರಾಮ ಪಂಚಾಯಿತಿಗಳ 257 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಪೂರ್ಣಗೊಂಡಿತು .
ಒಟ್ಟು 663 ಅಭ್ಯರ್ಥಿಗಳು ಕಣದಲ್ಲಿ ಇದ್ದು ಬೆಳಿಗ್ಗೆ ೮ ಗಂಟೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಯಿತು .
ಚಿಕ್ಕಮಗಳೂರು ಸೇರಿದಂತೆ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಭರದಿಂದ ಸಾಗಿದ್ದು ಸಿಬ್ಬಂದಿ ನೇಮಕ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು .
ಮತ ಎಣಿಕೆ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಇದ್ದರೂ ಕೂಡ ಅದನ್ನು ಲೆಕ್ಕಿಸದೆ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು . ಕೋವಿಡ್ ನಿಯಮಗಳ ವ್ಯಾಪಕ ಉಲ್ಲಂಘನೆಯಾಗಿತ್ತು .
ಗೆದ್ದವರು ಬಿಗಿ ವಿಜಯೋತ್ಸವ ಆಚರಿಸಿದರೆ ,ಸೋತವರು ಸಪ್ಪೆ ಮುಖ ಹಾಕಿಕೊಂಡು ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು .

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ