ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಭಾವಿ ರಾಜಕಾರಣಿಗಳು ಇದ್ದರೂ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸಲು ಅವರಿಗೆ ಕಾಳಜಿ ಇಲ್ಲದಿರುವುದರಿಂದ ಅಧಿಕಾರದಲ್ಲಿ ಮುಂದುವರಿಯಲು ಅರ್ಹರಲ್ಲ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್ ಎಚ್ ದೇವರಾಜ್ ಒತ್ತಾಯಿಸಿದ್ದಾರೆ .
ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಪ್ರಭಾವಿಗಳು. ಆದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾತ್ರ ಶೂನ್ಯ ಎಂದು ವ್ಯಂಗ್ಯವಾಡಿದ ಅವರು ಇವರು ಕೇವಲ ಭಾಷಣಕ್ಕೆ ಸೀಮಿತರಾಗಿದ್ದಾರೆ ಎಂದು ಟೀಕಿಸಿದ್ದಾರೆ .
ರಾಜ್ಯ ಬಜೆಟ್ ನಲ್ಲಿ ಜಿಲ್ಲೆಗೆ ಆದ್ಯತೆ ನೀಡದೆ ನಿರಾಸೆಯಾಗಿದೆ . ವೈದ್ಯಕೀಯ , ಎಂಜಿನಿಯರಿಂಗ್ ಕಾಲೇಜು ಇನ್ನಿತರೆ ಯೋಜನೆಗಳ ಪ್ರಸ್ತಾವವೂ ಇಲ್ಲ ಎಂದು ಛೇಡಿಸಿದರು .
ಕ್ಷೇತ್ರದ ಶಾಸಕ ಸಿ ಟಿ ರವಿ ತಮಿಳುನಾಡಿನ ಉಸ್ತುವಾರಿಯನ್ನು ಹೊತ್ತಿದ್ದು ಗೊತ್ತಿಲ್ಲದ ಭಾಷೆಯಲ್ಲಿ ಮಾತನಾಡಿ ಕ್ಷೇತ್ರದ ಜನ ತಲೆತಗ್ಗಿಸುವಂತೆ ಮಾಡುತ್ತಿದ್ದರೆಂದು ವಿಷಾದಿಸಿದರು .

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ