ಚಿಕ್ಕಮಗಳೂರು.:- ಕೋರೊನಾ ಎರಡನೇ ಅಲೆಯು ವ್ಯಾಪಾಕವಾಗಿ ಹರಡುತ್ತಿರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಔಷಧಿ ದರವನ್ನು ಹೆಚ್ಚಿಸುವಂತಿಲ್ಲ, ಹೆಚ್ಚಿಸಿದ್ದಲ್ಲಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಸಿ.ಟಿ.ರವಿ ಸೂಚಿಸಿದರು.
ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಖಾಸಗಿ ಆಸ್ಪತ್ರೆಗಳು ಶೇ. ೫೦% ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕು, ಇತರೆ ಖಾಯಿಲೆಗಳಿಗೆ ಸಂಬಂಧಿಸಿದ ರೋಗಿಗಳನ್ನು ನಿರ್ಲಕ್ಷಿಸದೇ ಪರ್ಯಾಯ ಮಾರ್ಗಗಳನ್ನು ರೂಪಿಸಬೇಕು . ಔಷಧಿ ದರಗಳನ್ನು ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.
ದೇವಸ್ಥಾನ, ಮಸೀದಿ, ಚರ್ಚ್‌ಗಳಿಗೆ ಹೆಚ್ಚಿನ ಜನರು ಭೇಟಿ ನೀಡುವುದರಿಂದ, ಅರ್ಚಕರಿಗೆ, ಮುಲ್ಲಾ, ಫಾದರ್‌ಗಳಿಗೆ , ಆಟೋ ಚಾಲಕರು, ಕ್ಷೌರಿಕರುಗಳಿಗೂ ಲಸಿಕೆ ನೀಡುವಂತೆ ತಿಳಿಸಿದರು.
ನಿಯಮ ಪಾಲಿಸದ ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಕ್ರಮ ಜರುಗಿಸುವಂತೆ ಹೇಳಿದರು.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ, ತಹಸೀಲ್ದಾರ್ ಕಾಂತರಾಜ್, ಜಿಲ್ಲಾ ಆರೋಗ್ಯ ಮತ್ತು ಕುಂಟಬ ಕಲ್ಯಾಣಾಧಿಕಾರಿ ಡಾ.ಉಮೇಶ್ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ