ಚಿಕ್ಕಮಗಳೂರು : ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಚಿಕ್ಕಮಗಳೂರು ಜಿಲ್ಲಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.
ಜಾನಪದ ಜಾತ್ರೆ, ಸಿನಿಮೋತ್ಸವ, ನೃತ್ಯೋತ್ಸವ, ಪುಸ್ತಕ ಮೇಳ, ವಸ್ತುಪ್ರದರ್ಶನ, ಕೃಷಿಮೇಳ, ಆಹಾರ ಮೇಳ ಇನ್ನಿತರೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಮಾಹಿತಿ ನೀಡಿದರು . ಶಾಸಕ ಸಿ.ಟಿ.ರವಿ ಮಾತನಾಡಿ, ಕಳೆದ ಬಾರಿಯ ಕಾರ್ಯಕ್ರಮದ ಲೋಗೋ, ಶೀರ್ಷಿಕೆ, ಅಡಿಬರಹವನ್ನು ಈ ಬಾರಿಯೂ ಮುಂದುವರಿಸಲಾಗುತ್ತದೆ ಪ್ರಯುಕ್ತ ಪ್ರೋ ಕಬಡ್ಡಿ ಮಾದರಿಯಲ್ಲಿ ಕಬಡ್ಡಿ ಸ್ಪರ್ಧೆ ಆಯೋಜಿಸುವ ಕುರಿತು ಪ್ರೋ ಕಬಡ್ಡಿ ಆಯೋಜಕರಲ್ಲಿ ಚರ್ಚಿಸಲಾಗಿದೆ. ಜಾನಪದ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ