ಚಿಕ್ಕಮಗಳೂರು, ಅ.೨೧: ತಮ್ಮ ವೈಯುಕ್ತಿಕ ಜೀವನ ಬದಿಗೊತ್ತಿ ಕಷ್ಟದ ಸಂದರ್ಭಗಳಲ್ಲಿಯೂ ಒತ್ತಡಗಳನ್ನು ಎದುರಿಸಿ ದಿನದ ೨೪ ಗಂಟೆ ಕಾರ್ಯನಿರ್ವಹಿಸುವ ಕರ್ತವ್ಯ ನಿರ್ವಹಿಸುವ ಪೊಲೀಸರನ್ನು ಗುರುತಿಸಬೇಕು ಎಂದು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಹೇಳಿದರು. ನಾವೆಲ್ಲರೂ ಸುರಕ್ಷಿತವಾಗಿರಬೇಕಾದರೆ ಪ್ರಾಣವನ್ನು ಪಣಕ್ಕಿಟ್ಟು ದೇಶ ಕಾಯುವ ಸೈನಿಕರು ಹಾಗೂ ನಾಗರೀಕ ಸಮಾಜದ ಒಳಗೆ ರಕ್ಷಣೆ ನೀಡುವ ಪೊಲೀಸರು ಕಾರಣ ಎಂದರು.
ಪೊಲೀಸ್ ಹುತಾತ್ಮರ ದಿನಾಚರಣೆ ಉದ್ದೇಶಿಸಿ ಮಾತನಾಡಿ ನೈತಿಕ ಮೌಲ್ಯಗಳ ಆಧಾರದಲ್ಲಿ ನಡೆದುಕೊಳ್ಳುವ ಸಮಾಜ ನಿರ್ಮಾಣ ಆಗುವುದಿಲ್ಲವೋ ಅಲ್ಲಿಯವರೆಗೆ ಕಾನೂನು , ಪೊಲೀಸ್ ವ್ಯವಸ್ಥೆಯ ಮೂಲಕ ಸುಸ್ಥಿರ ಸಮಾಜ ನಿರ್ಮಾಣದ ಕಡೆಗೆ ಹೆಜ್ಜೆ ಹಾಕಬೇಕಾಗುತ್ತದೆ. ಸಮಾಜದಲ್ಲಿ ಆಸ್ಪತ್ರೆ, ಪೊಲೀಸ್ ಠಾಣೆ ಮತ್ತು ಅನಾಥಾಲಯಗಳು ಹೆಚ್ಚಾಗುವುದು ಒಳ್ಳೆಯ ಸಂಗತಿಯಲ್ಲ ಎಂದರು .
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿದರು, ಪೊಲೀಸ್ ಹುತಾತ್ಮರನ್ನು ಸಂಸ್ಮರಣೆ ಮಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಜಿಲ್ಲೆಯ ೭ ಕರ್ನಾಟಕದ ೧೧ ಪೊಲೀಸರು ಸೇರಿ ದೇಶದಲ್ಲಿ ಈ ವರ್ಷ ೨೬೪ ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ