ಭಾನುವಾರ, ಅಕ್ಟೋಬರ್ 30, 2022

 ಅನುದಾನ ಹಂಚಿಕೆ ತಾರತಮ್ಯ ಆರೋಪ : ಪಿಡಿಒ -ಸದಸ್ಯರ ಮಧ್ಯೆ ಜಟಾಪಟಿ ;ರಸ್ತೆ ತಡೆ ಪ್ರತಿಭಟನೆ 


ಚಿಕ್ಕಮಗಳೂರು :ಅನುದಾನ ಹಂಚಿಕೆ ವಿಚಾರವಾಗಿ ಗ್ರಾಮ ಪಂಚಾಯತಿ ಸದಸ್ಯ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿಕೊಂಡ ಘಟನೆ ನಡೆದಿದೆ .

ಕಡೂರು ತಾಲ್ಲೂಕಿನ ನಾಗನಹಳ್ಳಿ ಗ್ರಾಮ ಪಂಚಾಯಿತಿ  ಸದಸ್ಯ ವಸಂತ್ ಕುಮಾರ್ ಮತ್ತು ಪಿಡಿಒ ಪದ್ದಣ್ಣ ಗಾವಾಡಿಯ ನಡುವೆ  ಚರಂಡಿ ಸ್ವಚ್ಛತೆ ವಿಚಾರದಲ್ಲಿ ಆರಂಭವಾದ ಜಗಳ ಅನುದಾನ ಹಂಚಿಕೆ ವಿಷಯಕ್ಕೆ ತಿರುಗಿ ಪರಸ್ಪರ ಬಡಿದಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ .

ಈ ಬಗ್ಗೆ ಸಖರಾಯಪಟ್ಟಣ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದ್ದು ಪಿಡಿಒ ತಲೆಮರೆಸಿಕೊಂಡಿದ್ದಾರೆ . 

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳೀಯರು ರಾಜಿ ಪಂಚಾಯಿತಿ ಮಾಡಲು ಯತ್ನಿಸಿದ್ದರೂ ಪಂಚಾಯಿತಿ ಕಾರ್ಯದರ್ಶಿ ವೆಂಕಟೇಶ್ ಉದ್ದೇಶಪೂರ್ವಕವಾಗಿ ಪಿಡಿಓರವರನ್ನು ತಲೆಮರೆಸಿಕೊಳ್ಳಲು ಸಹಕಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ .

ವಿಷಯ ತಿಳಿಯುತ್ತಿದ್ದಂತೆ ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿಶಾಂತೇಗೌಡ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಖರಾಯಪಟ್ಟಣ ಠಾಣೆ ಎದುರು ರಸ್ತೆ ತಡೆ ನಡೆಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ರಸ್ತೆ ತಡೆ ನಡೆಸಿದ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು .ಪ್ರಕರಣ ಈಗ ರಾಜಕೀಯ ಸ್ವರೂಪ ಪಡೆದಿದ್ದು ಎಲ್ಲಿಗೆ ಹೋಗಿ ನಿಲ್ಲುತ್ತದೆೊ ಕಾದು ನೋಡಬೇಕು 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...