ಚಿಕ್ಕಮಗಳೂರು :ಇದೇ ತಿಂಗಳ 13 ರಂದು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಶ್ರೀರಾಮ ಸೇನೆ ಆಶ್ರಯದಲ್ಲಿ ನಡೆಯಲಿರುವ ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ .
5 ರಾಜ್ಯ ಸಶಸ್ತ್ರ ಮೀಸಲು ಪಡೆ ,11 ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸೇರಿದಂತೆ 1500 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ .
26 ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಿದ್ದು, ವಿಶೇಷ ದಂಡಾಧಿಕಾರಿಗಳನ್ನು ನೇಮಿಸಲಾಗಿದೆ . 13 ರಂದು ಬಾಬಾಬುಡನ್ ಗಿರಿಗೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ .
ಶೋಭಯಾತ್ರೆ ಹಿನ್ನೆಲೆಯಲ್ಲಿ 13 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಬಸವನಹಳ್ಳಿ ಮುಖ್ಯ ರಸ್ತೆ ಮಹಾತ್ಮಗಾಂಧಿ ರಸ್ತೆಯಲ್ಲಿ ವಾಹನ ನಿಲುಗಡೆ ,ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ .
13 ರಂದು ಇಂದಿರಾಗಾಂಧಿ ರಸ್ತೆ, ರತ್ನಗಿರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ . ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ .
.jpeg)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ