ಕೊಟ್ಟಿಗೆಹಾರ :ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣ ಈಗ ಹೊಸ ತಿರುವು ಪಡೆಯ ತೊಡಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿಮಹಿಳೆಯ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ ಘಟನೆಯು ನಡೆದಿದೆ.ಬೆಳಗ್ಗೆ 7.30ಕ್ಕೆ ಕಾಡಾನೆ ತುಳಿದು ಮಹಿಳೆ ಸಾವಪಿದ್ದು ಸಂಜೆ 6 ಗಂಟೆಗೆ ಗ್ರಾಮಕ್ಕೆ ತೆರಳಿದ ಶಾಸಕ ಎಂ.ಪಿ.ಕುಮಾರಸ್ವಾಮಿ ನಡೆಯನ್ನ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.
ಈ ವೇಳೆ ಗ್ರಾಮಸ್ಥರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ.ಶಾಸಕ ಕುಮಾರಸ್ವಾಮಿಯನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದುಪ್ರಶ್ನೆ ಮಾಡಿದ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ
ಪೊಲೀಸರ ಕ್ರಮಕ್ಕೆ ಖಂಡನೆ ವ್ಯಕ್ತವಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಗೊಂಡಿದೆ .
ಶಾಸಕರ ಮೇಲೆ ಹಲ್ಲೆ ಯತ್ನ ನಡೆದಿದ್ದು ಅವರನ್ನು ಗ್ರಾಮದಿಂದ ಪೊಲೀಸರು ಜೀಪಿನಲ್ಲಿ ಸುರಕ್ಷಿತವಾಗಿ ಕರೆತಂದಿದ್ದಾರೆ.
ಹರಿದು ಹೋದ ಅಂಗಿಯೊಂದಿಗೆ ಸ್ಪಷ್ಟನೆಯನ್ನು ನೀಡಿದ ಶಾಸಕರು ಉದ್ದೇಶಪೂರ್ವಕವಾಗಿ ಈ ಹಲ್ಲೆ ಯತ್ನ ತಡೆದಿದೆ ಎಂದು ಆರೋಪಿಸಿದ್ದಾರೆ.


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ