ಚಿಕ್ಕಮಗಳೂರು : ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದ ದಲಿತ ಸಂಘಟನೆ ಮುಖಂಡರನ್ನು ಪೊಲೀಸರು ಇಂದು ಬಂಧಿಸಿದ್ದಾರೆ .
ಕಾರ್ಮಿಕರ ಮೇಲೆ ಹಲ್ಲೆ, ದೌರ್ಜನ್ಯ ಖಂಡಿಸಿ ಇಲ್ಲಿನ ಆಜಾದ್ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಕನ್ನಡ ರಾಜ್ಯೋತ್ಸವ ಮೆರವಣಿಗೆ ಬರುತ್ತಿದ್ದ ಸಂದರ್ಭದಲ್ಲಿ ಪ್ರತಿಭಟನೆ ನಿರತರು ಜಿಲ್ಲಾಡಳಿತ, ಸರ್ಕಾರದ ವಿರುದ್ಧ ಘೋಷಣೆ ಘೋಷಣೆ ಕೂಗಿದರು.
ಹಲ್ಲೆ, ದೌರ್ಜನ್ಯ ನಡೆಸಿದ ಆರೋಪಿಯನ್ನು ಬಂಧಿಸದ ಕ್ರಮ ಖಂಡಿಸಿ ಜಿಲ್ಲಾಡಳಿತ ಹಾಗೂ ಶಾಸಕರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಲು ಸಿದ್ದತೆ ನಡೆಸಿದ್ದು ಮುಂಜ್ರಾಗತಾ ಕ್ರಮವಾಗಿ ಪೊಲೀಸರು 20 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ