ಕೊಟ್ಟಿಗೆಹಾರ:ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ. ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋ ವನ್ನು ಈ ಭಾಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಾದ ಅರೆನೂರು ಸುಪ್ರೀತ್ ಸೆರೆ ಹಿಡಿದಿದ್ದಾರೆ.
ವಾರದ ಹಿಂದೆಯಷ್ಟೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಿದೆ ಇದೀಗ ಹೆಬ್ಬಾವಿನ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ