ಮಂಗಳವಾರ, ನವೆಂಬರ್ 15, 2022

ಅಡಿಕೆ ಎಲೆಚುಕ್ಕಿ ರೋಗ : ಗಂಭೀರ ಪರಿಗಣನೆ - ಮುಖ್ಯಮಂತ್ರಿ ಬೊಮ್ಮಾಯಿ

 


ಅಡಿಕೆ ಎಲೆಚುಕ್ಕಿ ರೋಗ :  ಗಂಭೀರ ಪರಿಗಣನೆ - ಮುಖ್ಯಮಂತ್ರಿ  ಬೊಮ್ಮಾಯಿ
ಚಿಕ್ಕಮಗಳೂರು :  ಅಡಿಕೆ ಬೆಳೆಗೆ ತಗಲಿರುವ ಎಲೆಚುಕ್ಕಿ ರೋಗದ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು , ರಾಜ್ಯ ಸರ್ಕಾರ ರೋಗ ತಡೆಗಟ್ಟಲು ಔಷಧಿ ಸಿಂಪಡಣೆಗೆ 10 ಕೋಟಿ ರೂ. ಬಿಡುಗಡೆ ಮಾಡಿಲಾದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಕಡೂರು ಹಾಗೂ ತರೀಕೆರೆ ತಾಲ್ಲೂಕುಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು  ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿಎಲೆಚುಕ್ಕಿ ರೋಗವು ದೊಡ್ಡಪ್ರಮಾಣದಲ್ಲಿ ಹರಡುತ್ತಿದ್ದು, ಈ ರೋಗದಿಂದ ಇಳುವರಿ ಕಡಿಮೆಯಾಗಿ ರೈತರಿಗೆ ನಷ್ಟವಾಗುತ್ತಿದೆ ಎಂದರು.
ರೋಗ ನಿವಾರಣೆಗೆ ವಿಶ್ವವಿದ್ಯಾಲಯಗಳ ತಂಡ, ಕೃಷಿ ಇಲಾಖೆ ಹಾಗೂ ಕೇಂದ್ರ ಸರ್ಕಾರದ ಸಂಸ್ಥೆಗಳ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು  ಅವರ ವರದಿ ಆಧರಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಬಳಿಕ ಸುಮಾರು ರೂ. ೩೭೫ ಕೋಟಿ ವೆಚ್ಚದಲ್ಲಿ ತರೀಕೆರೆ ತಾಲ್ಲೂಕಿನ ಪ್ರತಿ ಮನೆಗಳಿಗೆ ಕುಡಿಯುವ ನೀರು  ಕೊಡುವ ಮತ್ತು  ಘರ್‌ಘರ್‌ಗಂಗಾ ಯೋಜನೆಯಡಿಯಲ್ಲಿ ಅಜ್ಜಂಪುರ ಭಾಗದಲ್ಲಿ ಸುಮಾರು ರೂ. ೬೬೯ ಕೋಟಿ ವೆಚ್ಚದ ಬೃಹತ್ ಯೋಜನೆಗಳಿಗೆ ಚಾಲನೆ ನೀಡಿದರು. 
ಭದ್ರಾ ಮೇಲ್ದಂಡೆ ಕಾಮಗಾರಿಗಳಿಗೆ ಇನ್ನೂ ಹೆಚ್ಚಿನ ಅನುದಾನ ನೀಡಲಾಗುವುದು , ಎನ್‌ಆರ್‌ಇಜಿನಲ್ಲಿ ಚಿಕ್ಕಮಗಳೂರು ಜಿಲ್ಲೆ ಉತ್ತಮ ಸಾಧನೆ ಮಾಡಿದ್ದು ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತರೀಕೆರೆ ಶಾಸಕ ಡಿ.ಎಸ್.ಸುರೇಶ್  ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ  ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...