ಚಿಕ್ಕಮಗಳೂರು: ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡರ ವಿರುದ್ಧ ಸಲ್ಲಿಕೆಯಾಗಿರುವ ದೂರು ಆಧರಿಸಿ ಲೋಕಾಯುಕ್ತ ಪೊಲೀಸ್ತರು ತಕ್ಷಣ ಎಫ್ ಐ ಆರ್ ದಾಖಲಿಸಿ ತನಿಖೆ ಚುರುಕುಗೊಳಿಸುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ. ಎನ್ .ಜೀವರಾಜ್ ಆಗ್ರಹಿಸಿದ್ದಾರೆ.
ದೂರು ಪ್ರತಿಯನ್ನು ಮುಂದಿಟ್ಟುಕೊಂಡು ಸುದ್ದಿಗೋಷ್ಠಿ ನಡೆಸಿರುವ ಅವರು ಸುಮಾರು 200 ಎಕರೆ ಜಮೀನನ್ನು ಶಾಸಕ ಟಿ ಡಿ ರಾಜೇಗೌಡ145 ಕೋಟಿ ರೂ.ಗಳಿಗೆ ಪತ್ನಿ ಹೆಸರಿನಲ್ಲಿ ಖರೀದಿಸಿದ್ದು ಅಷ್ಟು ಹಣ ಅವರಿಗೆ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ್ದಾರೆ.
ಆಸ್ತಿ ಖರೀದಿಸಿರುವ ಬಗ್ಗೆ ತಮ್ಮ ತಕರಾರು ಇಲ್ಲ. ಚುನಾವಣೆಗೆ ಸ್ಪರ್ಧಿಸುವ ಸಮಯದಲ್ಲಿ 35 ಲಕ್ಷ ರೂ. ಇರುವುದಾಗಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಉಳಿಕೆ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿ ಆ ಬಗ್ಗೆ ದಾಖಲೆ ಸಲ್ಲಿಸಿದ್ದಾರೆಯೇ ಎಂದು ಕೇಳಿದ್ದಾರೆ.
ಬಾಳೆಹೊನ್ನೂರು ಸಮೀಪ ಸಿದ್ದಾರ್ಥ ಹೆಗ್ಡೆ ಇವರಿಗೆ ಸಂಬಂಧಿಸಿದ ಜಮೀನು ಖರೀದಿ ಪ್ರಕ್ರಿಯೆಯಲ್ಲಿಯೂ ಸಾಕಷ್ಟು ತೆರಿಗೆ ವಂಚನೆ ನಡೆದಿದೆ ಎಂದು ಆರೋಪಿಸಿದ್ದಾರೆ.
ದೂರು ಸಲ್ಲಿಕೆಯಾಗಿ ಸಾಕಷ್ಟು ದಿನಗಳು ಆಗಿದ್ದರು ಶಾಸಕರು ಇನ್ನೂ ಪ್ರತಿಕ್ರಿಯೆ ನೀಡದೆ ಇರುವುದು ತಪ್ಪನ್ನು ಒಪ್ಪಿಕೊಂಡಂತೆ ಆಗಿದೆ ಎಂದು ವ್ಯಾಖ್ಯಾನಿಸಿದರು.
ಲೋಕಾಯುಕ್ತರು ತಕ್ಷಣ ಎಫ್ ಐ ಆರ್ ದಾಖಲಿಸಿ ತನಿಖೆ ತೀವ್ರಗೊಳಿಸುವುದರ ಜೊತೆಗೆ ಕಾನೂನು ಪ್ರಕ್ರಿಯೆಗೂ ಮುಂದಾಗಬೇಕೆಂದು ಒತ್ತಾಯಿಸಿದರು.
ಪಕ್ಷದ ಜಿಲ್ಲಾ ಅಧ್ಯಕ್ಷ ಕಲ್ಮರುಡಪ್ಪ,' ನಗರಸಭೆ ಮಾಜಿ ಅಧ್ಯಕ್ಷ ದೇವರಾಜ್' ಸುದ್ದಿಗೋಷ್ಠಿಯಲ್ಲಿದ್ದರು.
.jpeg)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ