ಚಿಕ್ಕಮಗಳೂರು ನಗರದ ಹೊರವಲಯದ ಬೈಪಾಸ್ ರಸ್ತೆಗೆ ಹೊಂದಿಕೊಂಡಂತೆ ಇರೋ ಆಶ್ರಯ ಕಾಲೋನಿಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡ ಪತ್ತೆಯಾಗಿದ್ದು ದಾಖಲೆ ಸಲ್ಲಿಸುವಂತೆ ನಗರಸಭೆ ಅಧಿಕಾರಿಗಳು ಸೂಚಿಸಿದ್ದಾರೆ .
ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಆಯುಕ್ತ ಬಸವರಾಜ್ ನೇತತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ,ಮೇಲ್ನೋಟಕ್ಕೆ ಇದೊಂದು ಮಸಿದಿ ಎಂದು ತಿಳಿದು ಬಂದಿದ್ದು 3 ದಿನದೊಳಗೆ ಅಗತ್ಯ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗಿದೆ .
ಸೂಕ್ತ ದಾಖಲೆಗಳನ್ನು ನಿಗದಿತ ಸಮಯದಲ್ಲಿ ಒದಗಿಸದೆ ಇದ್ದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಅಧಿಕಾರಿಗಳು ಹೇಳಿದ್ದಾರೆ .
ಪತ್ರಕರ್ತನ ಮೇಲೆ ಹಲ್ಲೆ ಖಂಡನೆ :ಶೃಂಗೇರಿಯ ಪತ್ರಕರ್ತ ರಾಘವೇಂದ್ರ ಮೇಲೆ ಶಾಸಕ ಟಿ ಡಿ ರಾಜೇಗೌಡ ಬೆಂಬಲಿಗರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ .
ಪ್ರಸನ್ನ ಶೆಟ್ಟಿ ಮತ್ತು ಶ್ರೀನಿವಾಸ್ ಶೆಟ್ಟಿ ಎಂಬಿಬ್ಬರು ನಗರದ ಸೋಮೇಶ್ವರ ಹೋಟೆಲ್ ಒಂದರ ಬಳಿ ಹಲ್ಲೆ ಮಾಡಿದ್ದುಬಹೆಬ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ .
ರಾಘವೇಂದ್ರ ಮೇಲೆ ನಡೆದ ಹಲ್ಲೆಯನ್ನು ಪತ್ರಕರ್ತರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಖಂಡಿಸಿವೆ .

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ