ಚಿಕ್ಕಮಗಳೂರು : ಇಂದು ಸಂಜೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಬ್ಬರು ಮೃತಪಟ್ಟು ಹಲವರಿಗೆ ಗಾಯಗಳುಆಗಿವೆ.
ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ನಿಯಂತ್ರಣ ತಪ್ಪಿ ಜೀಪ್ ಕಂದಕಕ್ಕೆ ಬಿದ್ದು ಅಕ್ಷತಾ (35) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಹೊಸಗದ್ದೆಯಿಂದ ಹೊರನಾಡಿಗೆ ಹೋಗುತ್ತಿದ್ದ ಜೀಪ್ ಇದಾಗಿದ್ದು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕೋಲಾರದಿಂದ ಧರ್ಮಸ್ಥಳ ಕ್ಕೆ ಹೊರಟಿದ್ದ ಪ್ರವಾಸಿಗರ ಇನೋವಾ 20 ಅಡಿ ಪ್ರಪಾತಕ್ಕೆ ಪಲ್ಟಿ ಹೊಡೆದು ವಾಹನದಲಿದ್ದ ಐದು ಜನ ಪ್ರವಾಸಿಗರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ
ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಈ ದುರ್ಘಟನೆ ಸಂಭವಿಸಿದ್ದು ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ