ಚಿಕ್ಕಮಗಳೂರು : ದಾಸಶ್ರೇಷ್ಠರಲ್ಲಿ ಒಬ್ಬರಾದ ಕನಕದಾಸರು, ಸಾಹಿತ್ಯ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ಮಹಾನ್ ದಾರ್ಶನಿಕ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಬಣ್ಣಿಸಿದರು.
ಜಿಲ್ಲಾಡಳಿತದ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿ ಉದ್ಘಾಟಿಸಿ ಮಾತನಾಡಿದರು.
ವ್ಯಾಸರಾಯರ ಶಿಷ್ಯರಾದ ಕನಕದಾಸರು ವ್ಯಾಕರಣ, ತರ್ಕ , ಮೀಮಾಂಸೆ ಸಾಹಿತ್ಯವನ್ನು ಅಭ್ಯಸಿಸಿ ೫ ಮಹಾನ್ ಕಾವ್ಯಗಳನ್ನು ರಚಿಸಿದ್ದಾರೆ. ರಾಮಧಾನ್ಯಚರಿತ ಭಾಮಿನಿ ಷಟ್ಪದಿಯಲ್ಲಿ ರಚಿತವಾದ ಈ ಕಾವ್ಯ ೧೫೬ ಪದ್ಯಗಳನ್ನು ಒಳಗೊಂಡಿದ್ದು, ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದ ಕೃತಿ ಎಂದರು.
ಜಾತಿಯ ಮೂಲವನ್ನು ಪ್ರಶ್ನೆ ಮಾಡುವ ಮೂಲಕ ಸಮಾಜದಿಂದ ಜಾತಿ ವ್ಯವಸ್ಥೆಯನ್ಬು ಕಿತ್ತುಹಾಕಬೇಕು , ಮನುಷ್ಯ ತನ್ನ ಕರ್ತವ್ಯ ಮಾಡಬೇಕು ಎನ್ನುವ ಸಂದೇಶ ಸಾರಿದ್ದಾರೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ವೆಂಕಟೇಶ್ , ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಇತರರು ಪಾಲ್ಗೊಂಡಿದ್ದರು .

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ