ಚಿಕ್ಕಮಗಳೂರು: ಮೃತ ವ್ಯಕ್ತಿಯ ಹೆಸರಿಗೆ ಖಾತೆ ಮಾಡಿ ಕೊಟ್ಟಿರುವುದು ಸೇರಿದಂತೆ ಅನೇಕ ಆರೋಪಗಳನ್ನು ಎದುರಿಸುತ್ತಿರುವ ಕಡೂರು ತಹಸೀಲ್ದಾರ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರೈತ ಸಂಘ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಗುರು ಶಾಂತಪ್ಪ ಕಡೂರು ತಹಸಿಲ್ದಾರ್ ಉಮೇಶ್ ಬೇರೆಯವರ ಲಾಗಿನ್ ಬಳಸಿ ಭಾರಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ರೈತ ಸಂಘದ ನಿರಂತರ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ್ದರು ಉಪವಿಭಾಗಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಲ್ಲಿ ಮೀನಮೇಶ ಎಣಿಸುತ್ತಿದ್ದಾರೆ ಎಂದು ಟೀಕಿಸಿದರು.
ಈ ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ತುರ್ತಾಗಿ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರು ಸೂಚಿಸಿದರು ಜಿಲ್ಲಾಧಿಕಾರಿಗಳು ಕ್ರಮ ತೆಗೆದುಕೊಳ್ಳದೆ ಇರುವುದು ಅನುಮಾನಕ್ಕೆ ಎಡೆ ಮಾಡಿದೆ ಎಂದು ಆರೋಪಿಸಿದರು.
8 ದಿನದ ಒಳಗೆ ಶಿಸ್ತುಕ್ರಮ ತೆಗೆದುಕೊಳ್ಳದೆ ಹೋದಲ್ಲಿ ಅನಿರ್ದಿಷ್ಟ ಅವಧಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಸಿದರು

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ