ಬುಧವಾರ, ನವೆಂಬರ್ 9, 2022

ಕರಡು ಮತದಾರರ ಪಟ್ಟಿ ಪ್ರಕಟ: ಮತದಾರರ ಚೀಟಿ ಪರಿಷ್ಕರಣೆಗೆ ಡಿಸಿ ಸೂಚನೆ

 



ಚಿಕ್ಕಮಗಳೂರು : ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು ಮತದಾರರಲ್ಲಿ  ಜಾಗೃತಿ ಮೂಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಜಿಲ್ಲೆಯಲ್ಲಿ ಒಟ್ಟು ೯,೩೪,೭೬೯ ಮತದಾರರಿದ್ದು, ಅದರಲ್ಲಿ  ೪,೬೪,೨೨೮ ಗಂಡು ಹಾಗೂ ೪,೭೦,೫೦೫ ಹೆಣ್ಣು ಮತದಾರರಿದ್ದಾರೆ. ಅವರಲ್ಲಿ   ಯುವ ಮತದಾರರ ಸಂಖ್ಯೆ  ೧೧,೫೦೨  ಆಗಿದೆ ಎಂದರು
ಭಾರತ ಚುನಾವಣಾ ಆಯೋಗ ೪  ನವೆಂಬರ್ ೧೨, ೨೦, ಡಿಸೆಂಬರ್ ೩ ಮತ್ತು ೪ರಂದು ವಿಶೇಷ ಆಂದೋಲನ  ಹಮ್ಮಿಕೊಂಡಿದ್ದು ಬೂತ್ ಮಟ್ಟದ ಅಧಿಕಾರಿ(ಬಿಎಲ್‌ಒ)ಗಳು ಮನೆಮನೆಗೆ ತೆರಳಿ ಮತದಾರರಲ್ಲಿ ಅರಿವು ಮೂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಡಿಸೆಂಬರ್ ೮ರವರೆಗೆ ಮತದಾರರ ಗುರುತಿನ ಚೀಟಿ ಪರಿಷ್ಕರಣೆಗೆ ಅವಕಾಶವಿದೆ. ಮತದಾರರು ತಮ್ಮ ಹೆಸರು, ಜನ್ಮದಿನಾಂಕ, ವಿಳಾಸ ಪರಿಷ್ಕರಣೆ ಹಾಗೂ ಭಾವಚಿತ್ರ ಬದಲಾವಣೆ ಮಾಡಿಕೊಳ್ಳಬಹುದು ಎಂದರು .
ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು  ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮತ್ತು ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪಾ ಉಪಸ್ಥಿತರಿದ್ದರು.  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...