ಚಿಕ್ಕಮಗಳೂರು :ಚಿಕ್ಕಮಗಳೂರು ಸೇರಿದಂತೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಈ ತಿಂಗಳ ಅಂತ್ಯದೊಳಗೆ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯ ಮಂತ್ರಿಗಳೂ ಆದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ .
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ತಿಂಗಳ 15 ರ ಒಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದರು .
ಚಿಕ್ಕಮಗಳೂರಿನಲ್ಲಿ ಸ್ಪರ್ಧಿಸುವ ಬಗ್ಗೆ ಪ್ರಶ್ನಿಸಿದಾಗ ರಾಜ್ಯದ ವಿವಿಧ ಭಾಗಗಳಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದು ,ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು .
ಮೀಸಲಾತಿ ರಾಜಕೀಯ ಗಿಮಿಕ್ ಎಂದು ಟೀಕಿಸಿದ ಸಿದ್ದರಾಮಯ್ಯ , ಶೇ.40 ರಷ್ಟು ಕಮಿಷನ್ ಪಡೆಯುತ್ತಿರುವ ಬಗ್ಗೆ ಪ್ರಧಾನಿಗಳಿಗೆ ದೂರು ನೀಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವ್ಯಂಗ್ಯವಾಡಿದರು .
ಶಾಸಕ ಸಿ ಟಿ ರವಿ ಬಗ್ಗೆ ಕೆಲವರು ಮೃದು ಧೋರಣೆ ಅನುಸರಿಸುತ್ತಿರುವ ಬಗ್ಗೆ ಕೇಳಿದಾಗ ಸಾಫ್ಟ್ - ಹಾರ್ಡೂ ಏನೂ ಇಲ್ಲ ಎಂದು ಆರೋಪ ತಳ್ಳಿ ಹಾಕಿದರು..
ಪಕ್ಷ ಬಿಟ್ಟು ಬಿಜೆಪಿಗೆ ವಲಸೆ ಹೋದವರಿಗೆ ಮತ್ತೆ ಕಾಂಗ್ರೆಸ್ ನಿಂದ ಟಿಕೆಟ್ ಕೊಡುವ ಬಗ್ಗೆ ಪ್ರಶ್ನಿಸಿದಾಗ ,ಪಕ್ಷದ ನಾಯಕತ್ವ ಮತ್ತು ಸಿದ್ಧಾಂತ ಒಪ್ಪಿ ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದರು

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ