ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿಗಳು ಆದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆ ಖಂಡಿಸಿ ಶಾಸಕ ಸಿ.ಟಿ .ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ರೂಪಿಸಿದ್ದ ತಂತ್ರವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.
ತಾಲೂಕು ಕಚೇರಿಯಿಂದ ಮೆರವಣಿಗೆ ಹೋಗಿ ಚಿಕ್ಕಮಗಳೂರು ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿ.ಟಿ.ರವಿ ಮನೆಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಹಾಕುವ ಕಾರ್ಯಕ್ರಮ ರೂಪಿಸಲಾಗಿತ್ತು.
ಪ್ರತಿಭಟನಾಕಾರರನ್ನ ರಸ್ತೆ ಮಧ್ಯೆಯೇ ಪೊಲೀಸರು ತಡೆದರಲ್ಲದೆ ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿ ಮನೆ ರಸ್ತೆ ಮಧ್ಯೆಯೇ ಅಡ್ಡ ಹಾಕಿ ಕಾಂಗ್ರೆಸ್ ಕಾರ್ಯಕರ್ತರಿಗೆ ಬರುವಂತೆ ಸವಾಲು ಹಾಕಿದರು
ಹಂತದಲ್ಲಿ ಮುಲ್ಲಾ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಬಂಧನಕ್ಕೆ ಪೊಲೀಸರು ಮುಂದಾಗುತ್ತಿದ್ದಂತೆ ಮಾತಿನ ವಾಕ್ ಸಮರ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಗೊಂಡಿತ್ತು.
ಪೊಲೀಸ್-ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತಲ್ಲದೆ. ಶಾಸಕ ಸಿಟಿ ರವಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರೆ ರವಿ ಪರ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.
ಒಂದೆಡೆ ಕಾಂಗ್ರೆಸ್ ಮುಖಂಡರುಭಾಷಣ ಮಾಡಿದರೆ ಮತ್ತೊಂದೆಡೆ ಬಿಜೆಪಿ ಪ್ರತಿಭಟನೆ ಕೂಗು ಮೊಳಗಿ ಗೊಂದಲದ ವಾತಾವರಣ ಉಂಟಾಗಿತ್ತು
ರಸ್ತೆಯ ಎರಡು ಬದಿ ಇಬ್ಬರನ್ನೂ ಬಿಟ್ಟು ಮಧ್ಯೆ ಪೊಲೀಸರು ನಿಂತು ತಮಾಷೆ ವೀಕ್ಷಿಸಿದರು. ಶಾಸಕರ ಮನೆಗೆ ಪೊಲೀಸ್ ಹೆಚ್ಚಿನ ಕಾವಲು ಹಾಕಿದ್ದು ಎಚ್ಚರಿಕೆ ವಹಿಸಲಾಗಿದೆ.


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ