ಸೋಮವಾರ, ಡಿಸೆಂಬರ್ 5, 2022

ಇಂದಿನಿಂದ ದತ್ತ ಜಯಂತಿಗೆ ಚಾಲನೆ : ಪೊಲೀಸ್ ಕಟ್ಟೆಚ್ಚರ ; ಪಥಸಂಚಲನ

 


BIG NEWS : ಚಿಕ್ಕಮಗಳೂರು :ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಮೂರು ದಿನಗಳ ಕಾಲ ನಡೆಯುವ ವಾರ್ಷಿಕ ದತ್ತ ಜಯಂತಿಗೆ ಇಂದಿನಿಂದ  ಚಾಲನೆ ಸಿಗಲಿದೆ.

  ಡಿಸೆಂಬರ್ 6ರಂದು ಜಿಲ್ಲಾ ಕೇಂದ್ರ ಚಿಕ್ಕಮಗಳೂರಿನಲ್ಲಿ ಅನುಸೂಯ ಅಂಗವಾಗಿ ಜಯಂತಿ ಬೋಳ ರಾಮೇಶ್ವರ ದೇವಾಲಯದ ಆವರಣದಿಂದ ಪಾಲಿಟೆಕ್ನಿಕ್ ವರೆಗೆ ಮೆರವಣಿಗೆ ನಡೆಯಲಿದೆ. 

 ಬಳಿಕ ಮಹಿಳೆಯರು ಬಾಬಾಬುಡನ್ ಗಿರಿಗೆ ತೆರಳಿ ಗುಹೆಯೊಳಗೆ ದತ್ತ ಪಾದುಕೆಗಳ ದರ್ಶನ ಮಾಡಿ ಅನುಸೂಯ ಜಯಂತಿಯಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ.

ಡಿಸೆಂಬರ್ 7 ರಂದು ಚಿಕ್ಕಮಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಆಕರ್ಷಕ ಶೋಭ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಧಾರ್ಮಿಕ ಸಭೆಯು ನಡೆಯಲಿದೆ.

7 ರಂದು ನಡೆಯಲಿರುವ ಶೋಭ ಯಾತ್ರೆ ಹಾಗೂ ಮರುದಿನದ ಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಹಾಗೂ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಡಿಸೆಂಬರ್ 8 ರಂದು ಬೆಳಿಗ್ಗೆ ದತ್ತ ಮಾಲಾಧಾರಿಗಳು ಪೀಠಕ್ಕೆ ತೆರಳಿ ಸರದಿ ಸಾಲಿನಲ್ಲಿ ಹೋಗಿ ದತ್ತ ಪಾದುಕೆಗಳ ದರ್ಶನ ಪಡೆದು ದತ್ತ ಹೋಮ ಇನ್ನಿತರೆ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ.

ವ್ಯವಸ್ಥಾಪನಾ ಸಮಿತಿ ರಚಿಸಿರುವುದರ ಜೊತೆಗೆ ಈ ಬಾರಿ ಇಬ್ಬರು ಅರ್ಚಕರನ್ನು ತಾತ್ಕಾಲಿಕವಾಗಿ ನೇಮಿಸಿರುವುದು ವಿಶೇಷ. ಮೂರು ದಿನಗಳ ದತ್ತ ಜಯಂತಿ ಹಿನ್ನೆಲೆಯಲ್ಲಿ ಪ್ರಮುಖ ವೃತ್ತ ಸೇರಿದಂತೆ ಎಲ್ಲಡೆ ಕೇಸರಿ ಬ್ಯಾನರ್ ಬಂಟಿಂಗ್ಸ್ ಗಳು ರಾರಾಜಿಸುತ್ತಿವೆ.

ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ 15 ರಾಜ್ಯ ಸಶಸ್ತ್ರ ಮೀಸಲು ಪಡೆ ಪೊಲೀಸರು ಸೇರಿದಂತೆ 4500 ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಿದ್ದು ಗಡಿಪ್ರವೇಶದಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ.

51 ಸಿಸಿಟಿವಿಗಳನ್ನು ಅಳವಡಿಸಿರುವುದರ ಜೊತೆಗೆ 20 ವಿಡಿಯೋ ಕ್ಯಾಮರಾ ಹಾಗೂ ಡ್ರೋನ್ ಗಳನ್ನು ಬಳಸಿಕೊಳ್ಳಲಾಗುತ್ತಿದೆ.7 ರಂದು ನಡೆಯಬೇಕಿದ್ದ ವಾರದ ಸಂತೆಯನ್ನು ರದ್ದುಪಡಿಸಲಾಗಿದೆ. ಜನರಲ್ಲಿ ಧೈರ್ಯ ತುಂಬುವ ಸಲವಾಗಿ ಪೊಲೀಸ್ ಪಥ ಸಂಚಲನವನ್ನು ನಡೆಸಲಾಗಿದೆ


      "ತಾತ್ಕಾಲಿಕವಾಗಿ ನೇಮಕಗೊಂಡ ಅರ್ಚಕರು"



ಚುನಾವಣೆ ವರ್ಷವಾಗಿರುವುದರಿಂದ ಸಹಜವಾಗಿಯೇ ದತ್ತ ಜಯಂತಿ ರಂಗೇರಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...